ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ; ಡಿ.ಕೆ. ಶಿವಕುಮಾರ್‌ಗೆ ರಿಲೀಫ್
April 25, 2024
ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷವೊಡ್ಡಿದ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ಗೆ (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಅಲ್ಲದೆ, ಡಿ.ಕೆ. ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ (Karnataka High Court) ಸೂಚನೆ ನೀಡಿದೆ.
ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮತಯಾಚನೆ ಮಾಡುವ ವೇಳೆ, ನಮಗೆ ನೀವಾದರೆ, ನಿಮಗೆ ನಾವಾಗುತ್ತೇವೆ. ನಾನಿಲ್ಲಿ ಬ್ಯುಸಿನೆಸ್ ಡೀಲ್‌ಗೆ ಬಂದಿದ್ದೇನೆ. ಅಪಾರ್ಟ್‌ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ಹಕ್ಕುಪತ್ರವನ್ನು ನಿಮಗೆ ಹಸ್ತಾಂತರಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು
Tags