ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು
April 26, 2024
ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.
Tags