ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ; ಎಸ್ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ
April 27, 2024
ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.