ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್

Waves of Karnataka


 ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದಾರೆ. ದೆಹಲಿ ಪೊಲೀಸರು ಮೇ 1 ರಂದು ರೇವಂತ್ ರೆಡ್ಡಿ ಮತ್ತು ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್​​ಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.