ಜೂನ್ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ
May 27, 2024
ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್ 1ರಂದೇ ಇಂಡಿಯಾ ಒಕ್ಕೂಟದ (INDIA Bloc) ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ.
Tags