ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Waves of Karnataka


 ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ಹಣಕಾಸು ನೆರವು ಸೇರಿ ಪಂಚ ನ್ಯಾಯಗಳ ತತ್ವದಲ್ಲಿ ಕಾಂಗ್ರೆಸ್‌ ಪ್ರಾಣಾಳಿಕೆ ಬಿಡುಗಡೆ ಮಾಡಿದೆ. ಒಂದೊಂದು ನ್ಯಾಯ ತತ್ವವೂ ಐದೈದು ಭರವಸೆ ಹೊಂದಿದೆ. ಅಲ್ಲಿಗೆ ಕಾಂಗ್ರೆಸ್‌ 25 ಭರವಸೆಗಳನ್ನು ನೀಡಿದಂತಾಗಿದೆ. ಇನ್ನು, ಇದೇ ಪ್ರಣಾಳಿಕೆಯ ಭರವಸೆಯನ್ನು ಇಟ್ಟುಕೊಂಡು ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಕಾಂತಿಲಾಲ್‌ ಭುರಿಯಾ (Kantilal Bhuria) ನೀಡಿರುವ ಹೇಳಿಕೆಯು ಟೀಕೆಗೆ ಕಾರಣವಾಗಿದೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಆ ಕುಟುಂಬಕ್ಕೆ 2 ಲಕ್ಷ ರೂ. ನೀಡಲಾಗುವುದು” ಎಂದಿದ್ದಾರೆ