ರಾಮಮಂದಿರಕ್ಕೆ ಕಾಂಗ್ರೆಸ್ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ
May 07, 2024
ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಭಾಷಣಗಳು ಚುರುಕು ಪಡೆದಿವೆ. ಹತ್ತಾರು ವಿಷಯಗಳನ್ನು ಮುಂದಿಟ್ಟುಕೊಂಡು ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈಗ ಮಧ್ಯಪ್ರದೇಶದ (Madhya Pradesh) ಧಾರ್‌ನಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಕಾಂಗ್ರೆಸ್ ಮತ್ತೆ ರಾಮಮಂದಿರ ತಂಟೆಗೆ ಹೋಗಬಾರದು ಎಂದರೆ ಎನ್‌ಡಿಎಗೆ 400 ಕ್ಷೇತ್ರಗಳನ್ನು ಕೊಡಿ” ಎಂಬುದಾಗಿ ಮತದಾರರಲ್ಲಿ ಮನವಿ ಮಾಡಿದ್ದಾರೆ.
“ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂಬುದಾಗಿ ಮನವಿ ಮಾಡಿದರು
Tags