ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Waves of Karnataka


 ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.