ಪ್ರಜ್ವಲ್ ಕೇಸ್‌ನಿಂದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು
May 11, 2024
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು (Prajwal Revanna Case) ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಸಂಚಲನ ಮೂಡಿಸಿದೆ. ಇದರಿಂದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಭಂಗ ತಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಬಿಜೆಪಿ ವರಿಷ್ಠ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದು, “ಪ್ರಜ್ವಲ್ ರೇವಣ್ಣ ಕೇಸ್‌ನಿಂದ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಯಾವುದೇ ಭಂಗ ತರುವುದಿಲ್ಲ” ಎಂದು ತಿಳಿಸಿದರು.
Tags