ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್ ನಾಯಕ
May 12, 2024
ಉದ್ಯಮಿಗಳಾದ ಮುಕೇಶ್ ಅಂಬಾನಿ ಹಾಗೂ ಗೌತಮ್ ಅದಾನಿ ಅವರಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ. ಇದೇ ಕಾರಣಕ್ಕಾಗಿ ಅದಾನಿ-ಅಂಬಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಾತನಾಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ದೂರಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಅಂಬಾನಿ ಹಾಗೂ ಅದಾನಿ ದುಡ್ಡು ಕಳುಹಿಸಿದರೆ, ನಾವೂ ಅವರ ವಿರುದ್ಧ ಮಾತನಾಡುವುದಿಲ್ಲ” ಎಂದು ಹೇಳಿರುವ ವಿಡಿಯೊ ಈಗ ಸಂಚಲನ ಮೂಡಿಸಿದೆ.
Tags