ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್
May 13, 2024
ಸದಾ ರಾಜಕೀಯದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್ ಮುಖಂಡ(Congress Leader) ರಾಹುಲ್ ಗಾಂಧಿ(Rahul Gandhi) ಇನ್ನೂ ಎಲಿಜಿಬಲ್ ಬ್ಯಾಚುರಲ್ ಆಗಿಯೇ ಉಳಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರು ಯಾವಾಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ ಎಂಬ ಪ್ರಶ್ನೆ ಅವರ ಬೆಂಬಲಿಗರಲ್ಲಿ ಇದ್ದೇ ಇದೆ. ಆದರೂ ಅದ್ಯಾವುದಕ್ಕೂ ತಲೆಗೆಡಿಸಿಕೊಳ್ಳದ ರಾಹುಲ್ ಆ ಬಗ್ಗೆ ಮೌನ ತಳೆದಿದ್ದರು. ಈ ಬಾರಿ ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ರಾಯ್ ಬರೇಲಿಯಿಂದಲೂ ಕಣಕ್ಕಿಳಿದಿರುವ ರಾಹುಲ್ ಗಾಂಧಿ ಇಂದು ಭಾಗಿಯಾದ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್ ಶರ್ಮಾ ಜೊತೆ ಭಾಗಿಯಾದ ರಾಹುಲ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.
Tags