ಸೆಕ್ಸ್ ಕೇಸಲ್ಲಿ ಎಕ್ಸ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್ ರೇವಣ್ಣ
May 15, 2024
ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್ ಅಕೌಂಟ್ ಸ್ಟೇಟಸ್‌ನಿಂದ ಪ್ರಜ್ವಲ್ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್ ಮಾನ್ಯತೆ ಈಗ ಅಮಾನ್ಯಗೊಂಡಿದೆ.
ಸೋಷಿಯಲ್ ಮೀಡಿಯಾ ಎಕ್ಸ್ ಈ ಮೊದಲು ಟ್ವಿಟರ್ ಆಗಿತ್ತು. ಆಗಿನಿಂದಲೂ ಅಫೀಶಿಯಲ್ ಖಾತೆದಾರರಿಗೆ ಬ್ಲ್ಯೂ ಟಿಕ್ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್ ಮಸ್ಕ್ ಟ್ವಿಟರ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್ ಅನ್ನು ವಾಪಸ್ ಪಡೆಯುವ ಅಧಿಕಾರವನ್ನು ಎಕ್ಸ್ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.
Tags