ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ

Waves of Karnataka
0 minute read


 ಕೊನೆಗೂ ಹಲವು ದಿನಗಳ ಕುತೂಹಲಕ್ಕೆ ತೆರೆ ಎಳೆದು ಶುಕ್ರವಾರ (ಮೇ 3) ಕಾಂಗ್ರೆಸ್‌ ರಾಯ್‌ ಬರೇಲಿ (Rae Bareli) ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ (Lok Sabha Election 2024). ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ರಾಹುಲ್‌ ಗಾಂಧಿ ಇದೀಗ ಉತ್ತರ ಪ್ರದೇಶದಲ್ಲಿಯೂ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಟೀಕಿಸಿದ್ದಾರೆ. ವಯನಾಡಿನಲ್ಲಿ ಸೋಲುವ ಭೀತಿಯಿಂದ ರಾಹುಲ್‌ ಗಾಂಧಿ ರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.