ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

Waves of Karnataka


 ಹೊರ ರಾಜ್ಯಗಳ ಲೋಕಸಭಾ ಚುನಾವಣೆಗೆ (Lok Sabha Election 2024) ನನ್ನನ್ನು ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದಾರೆ. ಸಾಮಾನ್ಯವಾಗಿ ನಾನು ಹೊರ ರಾಜ್ಯಗಳಿಗೆ ಹೋಗಲ್ಲ. ನನಗೆ ಅದು ಇಷ್ಟವೂ ಆಗುವುದಿಲ್ಲ. ಇಲ್ಲೇ ಬೇಕಾದಷ್ಟು ಕೆಲಸ ಇದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.