ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Waves of Karnataka


 ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಲಭ್ಯವಾಗಿದ್ದು, ಇದು ಈಗ ಸಂಚಲನ ಮೂಡಿಸಿದೆ. ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಬಯಲಾಗಿದ್ದು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟಕ್ಕೂ, ದೇವೇಗೌಡ ಅವರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ” ಎಂಬುದಾಗಿ ಶಿವರಾಮೇಗೌಡ ಹೇಳಿದ್ದಾರೆ.

“ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್‌ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ” ಎಂಬುದಾಗಿ ಶಿವರಾಮೇಗೌಡ ಭರವಸೆ ನೀಡಿರುವುದು ಆಡಿಯೊದಲ್ಲಿದೆ.