ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Waves of Karnataka


 ಲೋಕ ಸಭಾ ಚುನಾವಣೆಯ (Lok Sabha Election) ಮೈತ್ರಿ ವಿಚಾರದಲ್ಲಿ ಅಸಮಾಧಾನ ಹೊಂದಿದ್ದ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷ (BJP) ಸೇರಿದರು. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಅಮಿತ್ ಮಲಿಕ್ ಸೇರಿದಂತೆ ಇತರ ನಾಲ್ವರು ಮಾಜಿ ಕಾಂಗ್ರೆಸ್ ನಾಯಕರು ಲವ್ಲಿ ಅವರೊಂದಿಗೆ ಪಕ್ಷಾಂತರಗೊಂಡರು.

ತಮಗೆ ಮತ್ತು ತಮ್ಮ ಸಹೋದ್ಯೋಗಿಗಳಿಗೆ ಬಿಜಪಿ ಸೇರಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಲವ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.