ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Waves of Karnataka


 ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಹೇಳಿದರು.