ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್? ಸಂಪುಟ ಪುನಾರಚನೆ ಇಲ್ಲ!
May 20, 2024
ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಮೀಟ್ ದ ಪ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ಬಂದರು. ಅಲ್ಲದೆ, ಈ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಕಿಡಿಕಾರಿದರು. ಇದೇ ವೇಳೆ, ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆಯೂ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
Tags