ಬುಲ್ಡೋಜರ್ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ
May 18, 2024
ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿ ಇದ್ದು, ನಾಯಕರ ಅಬ್ಬರದ ಪ್ರಚಾರ ಮುಂದುವರಿದಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಿದೆ ಎನ್ನುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.
ʼʼನಾವು ಇಲ್ಲಿಯ ತನಕ ಬುಲ್ಡೋಜರ್ ಬಳಸಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸ್ವತಃ ಪ್ರಧಾನಿಯೇ ನಿಯಮ ಉಲ್ಲಂಘಿಸುತ್ತಿದ್ದಾರೆ. ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದ ನಂತರ, ನಮ್ಮ ಸಂವಿಧಾನದ ಪ್ರಕಾರ ಎಲ್ಲವನ್ನೂ ಸಂರಕ್ಷಿಸಲಾಗುವುದು, ನಾವು ಸಂವಿಧಾನವನ್ನು ಅನುಸರಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.
Tags