ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?

Waves of Karnataka


 ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.