ಸಲಿಂಗ ಕಾಮ ಕೇಸ್; ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
June 23, 2024
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna Case) 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಸೂರಜ್‌ನನ್ನು ನಗರದ ಕೋರಂಮಗಲದ 42ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಜಡ್ಜ್ ಸೂಚಿಸಿದ್ದಾರೆ.
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಜೂನ್ 22ರಂದು ರಾತ್ರಿ ಎಫ್‌ಐಆರ್ ದಾಖಲಾಗಿತ್ತು. ನಂತರ ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಂತ್ರಸ್ತನ ವಿರುದ್ಧ ಸಾಕ್ಷ್ಯ ನೀಡಲು ಸೂರಜ್, ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿದ್ದಾಗ ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಬಂಧಿಸಿದ್ದರು. ಇದೀಗ ಸೂರಜ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Tags
