15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Waves of Karnataka


 ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಭಾನುವಾರ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಯಾವುದೇ ಸರ್ಕಾರವು 15 ದಿನಗಳಲ್ಲಿ ಬೇಕಾದರೂ ಪತನವಾಗಬಹುದು” ಎಂಬುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತೃಣಮೂಲ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ಮಾತನಾಡಿದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ” ಎಂದು ಹೇಳಿದರು.