ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್
June 27, 2024
ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.
Tags