ರಾಹುಲ್ ಗಾಂಧಿ ತೆರವು ಮಾಡುವ ವಯನಾಡ್‌ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

Waves of Karnataka


 ಈ ಬಾರಿಯ ಲೋಕಸಭಾ ಚುನಾವಣೆ (Lok Sabha polls)ಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಸ್ಪರ್ಧಿಸುತ್ತಾರೆ ಎನ್ನುವ ಎನ್ನುವ ನಿರೀಕ್ಷೆ ಇತ್ತು. ಸೋನಿಯಾ ಗಾಂಧಿ ತೆರವುಗೊಳಿಸಿದ್ದ ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುತ್ತಾರೆ ಎನ್ನಲಾಗಿತ್ತು. ಆದರೆ ಅವರು ಎಲ್ಲರ ನಿರೀಕ್ಷೆಯನ್ನು ತಲೆ ಕೆಳಗಾಗಿಸಿ ಪ್ರಚಾರದಲ್ಲಿ ಮತ್ರ ತೊಡಗಿಸಿಕೊಂಡಿದ್ದರು. ಇತ್ತ ಕೇರಳದ ವಯನಾಡು ಮತ್ತು ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ (Rahul Gandhi) ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕಡೆ ತಮ್ಮ ಸ್ಥಾನವನ್ನು ಬಿಟ್ಟು ಕೊಡಬೇಕಿದೆ. ಮೂಲಗಳ ಪ್ರಕಾರ ಅವರು ವಯನಾಡು ಕ್ಷೇತ್ರವನ್ನು ತೊರೆಯಲಿದ್ದು, ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.