ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ?

Waves of Karnataka


 ಕಳೆದ ಕೆಲ ತಿಂಗಳಿಂದ ದೇಶಾದ್ಯಂತ ತೀವ್ರ ಚರ್ಚೆ, ಕುತೂಹಲ, ರಾಜಕಾರಣಿಗಳ ಅಬ್ಬರದ ಪ್ರಚಾರ, ವಾದ, ವಾಗ್ವಾದ, ವಿವಾದಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು (Lok Sabha Election 2024) ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result 2024) ಪ್ರಕಟವಾಗಲಿದ್ದು, ದೇಶದ ಭವಿಷ್ಯಕ್ಕೆ ಇದು ದಿಕ್ಸೂಚಿ ಎನಿಸಲಿದೆ. ಸಹಜವಾಗಿಯೇ ರಾಜಕಾರಣಿಗಳು, ಅಭ್ಯರ್ಥಿಗಳ ಜತೆಗೆ ದೇಶದ ನಾಗರಿಕರ ಕುತೂಹಲವೂ ಜಾಸ್ತಿಯಾಗಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹ್ಯಾಟ್ರಿಕ್‌ ಬಾರಿಸುವ ಉತ್ಸಾಹದಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವೇ ಗೆಲುವು ಸಾಧಿಸಲಿದೆ ಎಂಬುದಾಗಿ ಬಹುತೇಕ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ.