ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

Waves of Karnataka


 ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.​ ಚಂದ್ರಬಾಬು ನಾಯ್ಡು (Chandrababu Naidu) ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್‌ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಎನ್‌ಡಿಎ ಒಕ್ಕೂಟದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು.‌