ಸಂಸತ್ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಚಕ್ಕರ್?
June 24, 2024
ಸೋಮವಾರದಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Session 2024) ಆರಂಭವಾಗಿದ್ದು, ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ 280 ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸಂವಿಧಾನದ ಪ್ರತಿಯನ್ನು ತೋರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಸಂಸತ್ ಅಧಿವೇಶನದ ವೇಳೆ ರಾಷ್ಟ್ರಗೀತೆ ಹಾಡುವಾಗ ರಾಹುಲ್ ಗಾಂಧಿ ಗೈರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ
Tags