ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Waves of Karnataka


 ಪುರುಷರ ಟಿ20 ವಿಶ್ವಕಪ್ 2024ರಲ್ಲಿ (T20 World Cup 2024 ) ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಅಲ್ಲದೇ ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು.