ಡಿ.ಕೆ ಸುರೇಶ್ ನಾಗಾಲೋಟಕ್ಕೆ ಡಾ. ಮಂಜುನಾಥ್ ಅಡ್ಡಿಯಾಗುವ ಆತಂಕ
June 02, 2024
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ (Bangalore Rural Lok Sabha Constituency) 24 ಲಕ್ಷ ಮತದಾರರನ್ನು ಹೊಂದಿರುವ ದೇಶದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ಸ್ಥಾನವು 2008ರಲ್ಲಿ ಕ್ಷೇತ್ರ ಮರುವಿಂಗಡಣೆ ನಂತರ ಅಸ್ತಿತ್ವಕ್ಕೆ ಬಂತು. ಇಲ್ಲಿ ಮೊದಲ ಚುನಾವಣೆ 2009ರಲ್ಲಿ ಇಲ್ಲಿ ನಡೆಯಿತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ (JDS) ನಾಯಕ ಎಚ್.ಡಿ.ಕುಮಾರಸ್ವಾಮಿ (HD kumaraswmay) ಈ ಕ್ಷೇತ್ರದ ಮೊದಲ ಸಂಸದ. ಆದರೆ, 2013ರ ಉಪಚುನಾವಣೆ ಸೇರಿದಂತೆ ಸತತ ಎರಡು ಬಾರಿ ಕಾಂಗ್ರೆಸ್ ಈ ಸ್ಥಾನವನ್ನು ಗೆದ್ದುಕೊಂಡಿದೆ. ಇಲ್ಲಿನ ಹಾಲಿ ಸಂಸದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ಸಹೋದರ ಡಿ.ಕೆ ಸುರೇಶ್.ಈ ಬಾರಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಕಾಂಗ್ರೆಸ್ ಅಭ್ಯರ್ಥಿಯನ್ನು ಎದುರಿಸಲು ಎಚ್.ಡಿ.ಕುಮಾರಸ್ವಾಮಿ ಅವರ ಭಾವ ಡಾ.ಸಿ.ಎನ್.ಮಂಜುನಾಥ್ ಅವರನ್ನು ನಿಲ್ಲಿಸಿದೆ.
Tags