ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್
June 26, 2024
ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.
ವಿಧಾನಸೌಧದ ಆವರಣದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.
Tags