ಸ್ಪೀಕರ್ ಚುನಾವಣೆಯಲ್ಲಿ ವೈಎಸ್ಆರ್ ಪಕ್ಷದಿಂದ ಬಿಜೆಪಿಗೆ ಬೆಂಬಲ
June 25, 2024
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ (Lok Sabha Speaker) ಹುದ್ದೆಗೆ ಬುಧವಾರ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಸಾರ್ವತ್ರಿಕ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಟಿಡಿಪಿಯಿಂದ ಸೋಲನುಭವಿಸಿದ ವೈಎಸ್ಆರ್ಪಿ ಲೋಕಸಭೆಯಲ್ಲಿ ನಾಲ್ಕು ಸಂಸದರನ್ನು ಹೊಂದಿದೆ. 2019 ರ ಚುನಾವಣೆಯಲ್ಲಿ ಪಕ್ಷವು ದಕ್ಷಿಣ ರಾಜ್ಯವನ್ನು 25 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಈ ವರ್ಷ ನಿರಾಸೆಯಾಗಿತ್ತು. ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಐದು ಸ್ಥಾನಗಳನ್ನು ಗೆದ್ದಿವೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಡೆಲ್ಲಿಯಲ್ಲಿ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್ಆರ್ ನಿರ್ಧರಿಸಿದೆ
Tags