ದಕ್ಷಿಣ ಆಫ್ರಿಕಾದ ಬೌಲಿಂಗ್ ಶಕ್ತಿ ಭಾರತದ ಬ್ಯಾಟಿಂಗ್ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ
June 28, 2024
ಬಾರ್ಬಡೋಸ್ನಲ್ಲಿ ಶನಿವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ 20 ವಿಶ್ವಕಪ್ ಫೈನಲ್ ಪಂದ್ಯವು ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಹಣಾಹಣಿಯಲ್ಲಿ ಗೆಲ್ಲುವ ಸಾಧ್ಯತೆ ಯಾರಿಗೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಏತನ್ಮಧ್ಯೆ, ಈ ಪಂದ್ಯದ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ದಕ್ಷಿಣ ಆಫ್ರಿಕಾದ ಪ್ರಬಲ ಬೌಲಿಂಗ್ ಘಟಕವು ಭಾರತಕ್ಕೆ ಲೆಕ್ಕಕ್ಕೇ ಇಲ್ಲ ಎಂದು ಹೇಳಿದ್ದಾರೆ.
ಟೂರ್ನಿಯಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್ ಗೆ ಪ್ರವೇಶಿಸಿದರೆ, ದಕ್ಷಿಣ ಆಫ್ರಿಕಾ ಅಫ್ಘಾನಿಸ್ತಾನವನ್ನು ಹೀನಾಯವಾಗಿ ಮಣಿಸಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್ನಲ್ಲಿ ಅಫ್ಘಾನಿಸ್ತಾನ 56 ರನ್ಗಳಿಗೆ ಆಲೌಟ್ ಆಗಿದ್ದರೆ, ಭಾರತ ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಿ ಗೆದ್ದಿತು.
ಟಿ 20 ವಿಶ್ವಕಪ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಂಡಗಳು ಇಲ್ಲಿಯವರೆಗೆ ಅಜೇಯವಾಗಿವೆ. ದಕ್ಷಿಣ ಆಫ್ರಿಕಾ ಎಂಟು ಪಂದ್ಯಗಳನ್ನು ಗೆದ್ದಿದ್ದರೆ, ಮೆನ್ ಇನ್ ಬ್ಲೂ ಏಳು ಪಂದ್ಯಗಳನ್ನು ಗೆದ್ದಿದೆ. ಅದರಲ್ಲೂ ದಕ್ಷಿಣ ಆಫ್ರಿಕಾ ತಂಡ ತನ್ನ ಪ್ರಬಲ ಬೌಲಿಂಗ್ ವಿಭಾಗದ ನೆರವಿನಿಂದೇ ಗೆದ್ದಿದೆ. ಈ ಬಗ್ಗೆ ಮಾತನಾಡಿದ ಮಂಜ್ರೇಕರ್, ಭಾರತೀಯ ಬ್ಯಾಟರ್ಗಳು ದಕ್ಷಿಣ ಆಫ್ರಿಕಾದ ಬೌಲರ್ಗಳ ನಡುವಿನ ಪಂದ್ಯ ಇದು ಎಂದು ಹೇಳಿದ್ದಾರೆ.
Tags