ನಡ್ಡಾ To ಎಚ್‌ಡಿಕೆ ; ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು
June 09, 2024
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಾದ ಬಳಿಕ ಮೈತ್ರಿಕೂಟದ ಪಕ್ಷಗಳ ಸಂಸದರು ಸಚಿವರಾಗಿ (Modi 3.0 Cabinet) ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರವಾದ ಕಾರಣ ಸಹಜವಾಗಿಯೇ ಈ ಬಾರಿ ಹೊಸ ಮುಖಗಳಿಗೆ ಸಂಪುಟಕ್ಕೆ ಸೇರಿಸಿಕೊಳ್ಳಲು ಆದ್ಯತೆ ನೀಡಿದೆ. ಅದರಲ್ಲೂ, ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದ ಸುರೇಶ್ ಗೋಪಿ, ಬಿಹಾರದ ಧೀಮಂತ ನಾಯಕ, ಭಾರತರತ್ನ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಪುತ್ರ ರಾಮನಾಥ್ ಠಾಕೂರ್ ಸೇರಿ ಹಲವು ಹೊಸಬರಿಗೆ ಸಚಿವ ಸ್ಥಾನ ನೀಡಲಾಗಿದೆ.
Tags