ಭ್ರಷ್ಟ ಅಧಿಕಾರಿಗಳಿಗೆ ಶಾಕ್, ರಾಜ್ಯದ 56 ಕಡೆ ಲೋಕಾಯುಕ್ತ ಮೆಗಾ ರೇಡ್
July 10, 2024
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ (Corrupt Officers) ಲೋಕಾಯುಕ್ತ ಶಾಕ್ ಮುಟ್ಟಿಸಿದೆ. ರಾಜ್ಯದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ (Lokayukta Raid) ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿವೆ.
9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಬೆಳಗಾಗುವ ಮುನ್ನವೇ ತಂಡ ಕಟ್ಟಿಕೊಂಡು ದಾಳಿ ನಡೆಸಿದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇವರ ತಪಾಸಣೆ ನಡೆದಿದೆ
Tags