8 ಗಂಟೆಗಳ ಕಾಲ ಮಾಜಿ ಸಚಿವ ನಾಗೇಂದ್ರ ಬೆವರಿಳಿಸಿದ ಎಸ್‌ಐಟಿ, ಇಂದು ಮತ್ತೆ ತನಿಖೆ
July 09, 20241 minute read
ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation Scam) ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ (Ex minisiter Nagendra) ನಿನ್ನೆ ಸುಮಾರು 8 ಗಂಟೆಗಳ ಕಾಲ ವಿಶೇಷ ತನಿಖಾ ತಂಡದ (SIT) ತನಿಖೆ ಎದುರಿಸಿದರು. ಶಾಸಕ ಬಸವನಗೌಡ ದದ್ದಲ್ (Basavanagowda Daddal) ಅವರನ್ನೂ ನಾಲ್ಕು ಗಂಟೆಗಳ ಕಾಲ ಪ್ರಶ್ನಿಸಲಾಗಿದೆ.ಮತ್ತೆ ತನಿಖೆಗೆ ಹಾಜರಾಗುವಂತೆ ಇಬ್ಬರಿಗೂ ನೋಟೀಸ್ ನೀಡಲಾಗಿದೆ. ಪ್ರಕರಣದ ಬಗ್ಗೆ ಇಬ್ಬರನ್ನೂ ಪ್ರತ್ಯೇಕವಾಗಿ ಪ್ರಶ್ನಿಸಲಾಗುತ್ತಿದೆ. ಹಗರಣ ನಡೆದ ಸಂದರ್ಭದಲ್ಲಿ ನಾಗೇಂದ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ಶಾಸಕ ದದ್ದಲ್ ಈಗಲೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ.
ನಿನ್ನೆ ಬೆಳಗ್ಗೆ 11 ಗಂಟೆಗೆ ಎಸ್ಐಟಿ ಮುಂದೆ ವಿಚಾರಣೆಗೆ ನಾಗೇಂದ್ರ ಹಾಜರಾಗಿದ್ದರು. ಎಸ್‌ಐಟಿ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿತ್ತು. ಇಂದು ಮತ್ತೆ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲಾಗಿದೆ. ನಿನ್ನೆ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಿದ್ದ ದದ್ದಲ್, ನಾಲ್ಕು ಗಂಟೆಗಳ ಕಾಲ ವಿಚಾರಣೆ ಎದುರಿಸಿ ತೆರಳಿದರು. ಅವರಿಗೂ ಮತ್ತೆ ಬರುವಂತೆ ನೋಟೀಸ್ ಕೊಡಲಾಗಿದೆ.
Tags