ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು (Karnataka Jobs Reservation) ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Karnataka Congress government) ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BJP President BY Vijayendra) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ (jobs for kannadigas) ಉದ್ಯೋಗ ಮೀಸಲು (jobs reservation in private sector) ಬಗ್ಗೆ ವಿಧೇಯಕ (karnataka jobs for locals bill) ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.