ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ (Farmer humiliation) ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜನತೆಯ, ಮಾಧ್ಯಮಗಳ ಹಾಗೂ ಸರಕಾರದ ಆಕ್ರೋಶ ಎದುರಿಸಿದ್ದ ಬೆಂಗಳೂರಿನ ಜಿಟಿ ವರ್ಲ್ಡ್ ಮಾಲ್ (GT World Mall), ಸ್ವಯಂಪ್ರೇರಿತವಾಗಿ ಬಂದ್ (GT World Mall Bandh) ಮಾಡಿದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು (BBMP Officers) ಮಾಲ್ ಅನ್ನು ಸೀಜ್ ಮಾಡಿದ್ದಾರೆ.
ಮಾಲ್ ಬಾಗಿಲಿಗೆ ಬೀಗ ಜಡಿಯಲಾಗಿದ್ದು, ʼಆಸ್ತಿ ತೆರಿಗೆ (Property Tax) ಪಾವತಿಸದ ಕಾರಣಕ್ಕಾಗಿ ಮಾಲ್ ಅನ್ನು ಸೀಲ್ ಮಾಡಲಾಗಿದೆʼ ಎಂದು ಬಾಗಿಲಿಗೆ ಅಂಟಿಸಲಾದ ನೋಟೀಸ್‌ನಲ್ಲಿ ತಿಳಿಸಲಾಗಿದೆ. 2023-24ನೇ ಸಾಲಿನ 1,78,23,560 ಕೋಟಿ ರೂ. ಆಸ್ತಿ ತೆರಿಗೆ ಬಾಕಿಯಿದ್ದು, ಪ್ರಸಕ್ತ ಸಾಲಿನಲ್ಲಿ 1,78,23,460 ಆಸ್ತಿ ತೆರಿಗೆ ಪಾವತಿಸಬೇಕಿದೆ. ತೆರಿಗೆ ಪಾವತಿಸಿಲ್ಲ ಅಂತ ಬಿಬಿಎಂಪಿ ಜಿಟಿ ಮಾಲ್ ಅನ್ನು ಬಂದ್ ಮಾಡಿದೆ. ಬಿಬಿಎಂಪಿಯ ಕಂದಾಯ ಇಲಾಖೆ ಅಧಿಕಾರಿಗಳು ಮಾಲ್‌ಗೆ ಬೀಗ ಹಾಕಿದ್ದು, ತೆರಿಗೆ ಕಟ್ಟುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ತೆರಿಗೆ ಪಾವತಿಸಿದ ಮೇಲೆ ಮಾಲ್ ತೆರೆಯಲು ಒಪ್ಪಿಗೆ ನೀಡಲಿದ್ದಾರೆ.