ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಗನಿಗೂ ಸಂಕಷ್ಟ ಸಾಧ್ಯತೆ ಕಂಡುಬಂದಿದೆ. ದದ್ದಲ್ ಮಗನಿಗೂ ಇ.ಡಿ ನೋಟಿಸ್ (ED Notice) ನೀಡಲಿದೆ ಎಂದು ಗೊತ್ತಾಗಿದೆ
4 ಎಕರೆ 30 ಗುಂಟೆ ಜಮೀನು ಖರೀದಿಯ ವಿವರಣೆ ಕೇಳಿ ನೋಟಿಸ್ ನೀಡಲಾಗುತ್ತಿದ್ದು, ಮಗ ತ್ರಿಶೂಲ್ ನಾಯಕ್ ಹೆಸರಲ್ಲಿ ದದ್ದಲ್ ಖರೀದಿಸಿರುವ ಜಮೀನು ಇದಾಗಿದೆ. ಅಧಿಕಾರಿ ಚಂದ್ರಶೇಖರ ಆತ್ಮಹತ್ಯೆಗೂ ಮುನ್ನವೇ ಜಮೀನು ಖರೀದಿ ಮಾಡಲಾಗಿತ್ತು. ಎಕರೆಗೆ 36 ಲಕ್ಷ ರೂ ಹಾಗೆ ಕೊಟ್ಟು ತ್ರಿಶೂಲ್ ಹೆಸರಲ್ಲಿ ಜಮೀನು ಖರೀದಿ ಮಾಡಲಾಗಿದೆ.
ಸಿರವಾರ ಹೋಬಳಿ ಗಣದಿನ್ನಿ ಗ್ರಾಮದಲ್ಲಿ ಸರ್ವೇ ನಂ 33/1 ನಂಬರಿನ, ಬಸನಗೌಡ ತಂ ಸಿದ್ದನಗೌಡ ಎಂಬುವರಿಂದ ಜಮೀನು ಖರೀದಿ ಮಾಡಲಾಗಿದ್ದು, 22-05-2024 ರಲ್ಲಿ ತ್ರಿಶೂಲ್ ನಾಯಕ್ ಹೆಸರಲ್ಲಿ ರಿಜಿಸ್ಟರ್ ಮಾಡಲಾಗಿದೆ. ಸದ್ಯ ದದ್ದಲ್ ಪುತ್ರ ತ್ರಿಶೂಲ್ ದೆಹಲಿಯಲ್ಲಿ ವೈದ್ಯರಾಗಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ.
.