ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

Waves of Karnataka


 ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಶುಕ್ರವಾರ ಎಸ್‌ಸಿಸಿಪಿ, ಟಿಎಸ್‌ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.