ಬ್ಯಾಂಕ್‌ಗಳಲ್ಲಿ ಪದೇಪದೆ ಹಣ ಅಕ್ರಮ ವರ್ಗಾವಣೆ (Bank Irregularities) ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಮಾಡಿದೆ. ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್ ಸುತ್ತೋಲೆ ಹೊರಡಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ಗೆ ಸೂಚನೆ ನೀಡಿದ್ದಾರೆ. ಈ ಎರಡು ಬ್ಯಾಂಕ್‌ಗಳ ಎಲ್ಲ ಬ್ರ್ಯಾಂಚ್‌ಗಳಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಯುನಿವರ್ಸಿಟಿ ಮತ್ತಿತರ ಸಂಸ್ಥೆಗಳು ಠೇವಣಿ, ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯಲು ಸೂಚಿಸಿದ್ದಾರೆ. ಇನ್ನು ಮುಂದೆ ಈ ಎರಡು ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ ಹೂಡಿಕೆ ಇಡಬಾರದು. ಎಲ್ಲ ಇಲಾಖೆಗಳು ಅಕೌಂಟ್ ಕ್ಲೋಷರ್ ವರದಿಯನ್ನು ಸೆ.20ರ ಒಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.