ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Waves of Karnataka


 ದಲಿತರು, ಶೋಷಿತರಿಗೆ ನ್ಯಾಯ ಒದಗಿಸುತ್ತೇವೆ ಎಂದು ಬಣ್ಣದ ಬಣ್ಣದ ಮಾತುಗಳನ್ನಾಡುತ್ತಾರೆ. ನಾನು ಬಸವ ಅನುಯಾಯಿ, ಅಂಬೇಡ್ಕರ್ ವಾದಿ ಎನ್ನುತ್ತಾರೆ. ಸಿದ್ದರಾಮಯ್ಯ ಟೋಕನಿಸಂ ರೀತಿ ಸಾಂಕೇತಿಕವಾಗಿ ಮಾತನಾಡುತ್ತಾರೆ. ಆದರೆ ಅಂಬೇಡ್ಕರ್, ಬಸವಣ್ಣನವರ ತತ್ವದ ವಿರುದ್ಧವಾಗಿದ್ದಾರೆ. ಮಾಡಬೇಕಾದುದನ್ನೆಲ್ಲ ಮಾಡುತ್ತಿಲ್ಲ, ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಅಹಿಂಸಾ (Actor Chetan Ahimsa) ಆಗ್ರಹಿಸಿದ್ದಾರೆ.

ಕರ್ನಾಟಕ ಅಹಿಂದ ಸಂಘಟನೆಯ ಒಕ್ಕೂಟದಿಂದ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಹಾಗೂ ಆದಿವಾಸಿಗಳ 25 ಸಾವಿರ ಕೋಟಿ ಹಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇನ್ನು ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.