ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಕೊಪ್ಪಳದ ಗಿಣಿಗೇರ ಏರ್ಸ್ಟ್ರಿಪ್‌ನಲ್ಲಿ ಪ್ರತಿಕ್ರಿಯೆ ನೀಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಹೇಳಿದರು.