ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Waves of Karnataka


 ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕೆರಳಿದ ಕಾಂಗ್ರೆಸ್ ಪಡೆ, ನಾಳೆ(ಆ.19) ಬೆಳಗ್ಗೆ 11 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಗೆ (Congress Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಸಚಿವರು ಸ್ಥಳೀಯ ಶಾಸಕರು ಕೆಪಿಸಿಸಿ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇಲ್ಲಸಲ್ಲದ ಆರೋಪ ಮಾಡಲು ಹೊರಟಿದ್ದಾರೆ. ಹಾಗಾಗಿ ಮುಖಂಡರಿಗೆ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಶಾಂತಿಯುತ ಪ್ರತಿಭಟನೆ ಅಗಿದ್ದು, ಕೆಲ ಕಿಡಿಗೇಡಿಗಳು ಕಲ್ಲೊಡೆಯುವ ಕೆಲಸ ಮಾಡುತ್ತಾರೆ. ಹಾಗಾಗಿ ಸ್ವಲ್ಪ ಹುಷಾರಾಗಿ ಪ್ರತಿಭಟನೆ ಮಾಡಿ ಅಂತ ಹೇಳಿದ್ದೇನೆ. ನಮ್ಮದು ಗಾಂಧಿ ತತ್ವ, ಈ ದೇಶಕ್ಕೆ ಒಂದು ಸಂದೇಶ ಕೊಡಬೇಕು. ಎಐಸಿಸಿಗೆ ಪ್ರತಿಭಟನೆ ಬಗ್ಗೆ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಕೊಡಬೇಕು, ಹಾಗಾಗಿ ಭೇಟಿ ಮಾಡಿದ್ದೆ ಎಂದರು.