ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ನಿನ್ನೆ ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಚನ್ನಪಟ್ಟಣ ಉಪ ಚುನಾವಣೆಯ (Channapatna By Election) ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ತಿಳಿಸಿ ಅಚ್ಚರಿಯಲ್ಲಿ ಕೆಡವಿದರು.
ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ʼಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿʼ ಎಂದು ಡಿಕೆಶಿ ಹೇಳಿದ್ದಾರೆ. ಸಿಪಿ ಯೋಗೇಶ್ವರ (CP Yogeshwara) ಅವರು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ಅಭ್ಯರ್ಥಿಯಾಗಿ ನಿಲ್ಲುವ ಆಸಕ್ತಿ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ಹಾಗೂ ಜೆಡಿಎಸ್‌ನಿಂದ (BJP – JDS) ಸೂಕ್ತ ಪ್ರತಿಕ್ರಿಯೆ ಬಾರದ ಕಾರಣ, ಅವರು ಕಾಂಗ್ರೆಸ್‌ನಿಂದ (Congress) ನಿಲ್ಲಲಿದ್ದಾರೆ ಎಂದು ಸುದ್ದಿಯಾಗಿತ್ತು. ಇನ್ನೊಂದೆಡೆ, ಕಾಂಗ್ರೆಸ್‌ನಿಂದ ಡಿಕೆ ಸುರೇಶ್ (DK Suresh) ಅವರು ಕಣಕ್ಕಿಳಿಯಲಿದ್ದಾರೆ ಎಂದು ಸುದ್ದಿಗಳು ಹಬ್ಬಿದ್ದವು. ಆದರೆ ಇದೀಗ ಚನ್ನಪಟ್ಟಣದ ಅಭ್ಯರ್ಥಿ ನಾನೇ ಎನ್ನುವ ಮೂಲಕ ಡಿಕೆಶಿ ಅಚ್ಚರಿ ಮೂಡಿಸಿದ್ದಾರೆ