ಮುಡಾ ತನಿಖೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌; ಸಿಎಂಗೆ ಸಂಕಷ್ಟ

Waves of Karnataka


 ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ಬಿಗಡಾಯಿಸಿದೆ. ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಇಂದು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು.

ದೂರುದಾರ ಅಬ್ರಹಾಂ ಅವರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಪ್ರಾಸಿಕ್ಯೂಶನ್‌ಗೆ ದೂರು ದಾಖಲಿಸಲು ಅನುಮತಿ ನೀಡಿದರು.