ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ಸಮರ ಸಾರಿದ್ದಾರೆ (Teachers Protest). ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲಾಖೆ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಬೀದಿಗಿಳಿಯಲು ನಿರ್ಧರಿಸಿದ್ದಾರೆ.