ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ

Waves of Karnataka


 ನಟ ಧ್ರುವ ಸರ್ಜಾ (Dhruva Sarja) ಮ್ಯಾನೇಜರ್ (Manager) ಅಶ್ವಿನ್‌ ಎಂಬಾತನನ್ನು ಬನಶಂಕರಿ ಪೊಲೀಸರು (Banashankari Police) ಬಂಧನ ಮಾಡಿದ್ದಾರೆ. ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ (Assault case) ನಡೆಸಲು ಈತ ಕೂಡ ಕಾರಣ ಎಂಬ ವಿಚಾರ ತನಿಖೆಯಿಂದ ಗೊತ್ತಾದ ಹಿನ್ನೆಲೆಯಲ್ಲಿ ಅಶ್ವಿನ್‌ನನ್ನು ಬಂಧನ ಮಾಡಲಾಗಿದೆ.


ಮೂರು ತಿಂಗಳ ಹಿಂದೆ ಅಂದರೆ ಮೇ 26ರಂದು ಕನಕಪುರ ಮೂಲದ ಹರ್ಷ ಹಾಗೂ ಸುಭಾಷ್ ಎಂಬುವವರು ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದರು. ದೂರು ದಾಖಲಿಸಿದ ಬಳಿಕ ಅವರಿಬ್ಬರನ್ನು ಬಂಧನ ಮಾಡಲಾಗಿತ್ತು. ಇದೀಗ ತನಿಖೆ ವೇಳೆ ಹಲ್ಲೆ ಹಿಂದಿನ ಮಾಸ್ಟರ್ ಮೈಂಡ್ ನಟ ಧ್ರುವ ಸರ್ಜಾ ಮ್ಯಾನೇಜರ್ ಆಗಿರುವ ಅಶ್ವಿನ್ ಎಂದು ತಿಳಿದುಬಂದಿದೆ. ಬಂಧಿತ ಅಶ್ವಿನ್‌ ಸೇರಿ ಇಲ್ಲಿವರೆಗೆ ನಾಲ್ವರನ್ನು ಬಂಧನ ಮಾಡಲಾಗಿದೆ.