ಮಹಿಳೆಯರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಹಿನ್ನೆಲೆಯ ಸಚಿವರು ಮತ್ತು ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿತು
ಸಿಎಂ ನಿವಾಸ ಕಾವೇರಿಗೆ ಆಗಮಿಸಿದ್ದ ನಿಯೋಗದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಎಂಸಿ ಸುಧಾಕರ್, ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಮಾಲೂರು ಮಂಜೇಗೌಡ, ಕುಣಿಗಲ್ ರಂಗನಾಥ್, ಎಸ್ ರವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.