ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಎಂಎಸ್ ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ರೋಗಿಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ
ಆರ್‌ಎಂವಿ ಲೇಔಟ್ ಬಳಿ ಇರುವ ರಾಮಯ್ಯ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಗುರುವಾರ ಮಧ್ಯಾಹ್ನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ ಎರಡನೇ ಅಂತಸ್ಥಿನಲ್ಲಿರುವ ಕಾರ್ಡಿಯಕ್ ಎಸಿ ವಾರ್ಡ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬಳಿಕ ಇತರೆ ವಾರ್ಡ್‌ಗಳಿಗೆ ಬೆಂಕಿ ಹರಡಿದೆ.
ಅಗ್ನಿಶಾಮಕ ಇಲಾಖೆ ಬಂದು ಅಗತ್ಯ ಕ್ರಮಕೈಕೊಂಡಿದ್ದಾರೆ. ಯಾವುದೇ ರೋಗಿಗಳಿಗೆ ಸಮಸ್ಯೆಯಾಗಿಲ್ಲ. ಕಾರಣ ಏನು ಎಂದು ತಿಳಿದುಬಂದಿಲ್ಲ. ಅಗತ್ಯ ಕ್ರಮ ತಗೆದುಕೊಂಡಿದ್ದೇವೆ. ವಾರ್ಡ್‌ನಲ್ಲಿದ್ದ 3 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ