ಮುಡಾ ಕೇಸ್‌ ಡೈವರ್ಟ್‌ಗೆ ದರ್ಶನ್‌ ಫೋಟೊ ರಿಲೀಸ್‌; ಪ್ರಲ್ಹಾದ್ ಜೋಶಿ ಆರೋಪಕ್ಕೆ ಡಿಸಿಎಂ ಡಿಕೆಶಿ ಟಾಂಗ್

Waves of Karnataka


 ಸಂಸದರೇ ನಟ ದರ್ಶನ್, ಮುಡಾ ವಿಚಾರ ಎಲ್ಲವನ್ನು ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ.. ಇಲ್ಲಿಂದಲೇ ನಿಮಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ವ್ಯಂಗ್ಯ ಮಾಡಿದರು.

ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ ಇರುವ ಫೋಟೋವನ್ನು ಸರ್ಕಾರವೇ ಬಿಡುಗಡೆ ಮಾಡಿದೆ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು

ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು “ಮಹದಾಯಿ ವಿಚಾರವಾಗಿ ಸರ್ವ ಪಕ್ಷ ಸಭೆ ಅಥವಾ ನಿಯೋಗದ ಸಭೆ ನಡೆಸುವುದೋ ಎನ್ನುವ ಬಗ್ಗೆ 15 ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು. ಹಾಗೂ ನಮ್ಮ ಹೋರಾಟದ ಸ್ವರೂಪದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು. ಜೋಶಿ ಅವರು ಸರ್ಕಾರದ ಮೇಲೆ ಮಾಡಿರುವ ಗಂಭೀರ ಆರೋಪದ ಬಗ್ಗೆ ಮರು ಪ್ರಶ್ನಿಸಿದಾಗ “ಅವರು ಮಾಡುತ್ತಿರಲಿ” ಎಂದರು.